Connect with us

    LATEST NEWS

    ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ – ಶಾಸಕ ರಘುಪತಿ ಭಟ್

    ಉಡುಪಿ ಎಪ್ರಿಲ್  17: ರಾಜ್ಯ ಸರಕಾರದ ಕೊರೊನಾ ಅಲೆ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರಕಾರದ ವಿರುದ್ದ ಸ್ವತಃ ಬಿಜೆಪಿ ಪಕ್ಷದ ಶಾಸಕರೇ ಅಸಮಧಾನ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಈ ಕುರಿತಂತೆ ಮಾತನಾಡಿದ ಶಾಸಕ ರಘುಪತಿ ಭಟ್ ಉಡುಪಿ ಜಿಲ್ಲೆಯಲ್ಲಿ ಧಾರ್ಮಿಕ ಕೇಂದ್ರಗಳೇ ಅಧಿಕವಾಗಿರುವ ಹಿನ್ನಲೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವ ಮೂಲಕ ಜನರ ಧಾರ್ಮಿಕರ ಭಾವನೆಗಳಿಗೆ ಅಡ್ಡಿ ಮಾಡಬಾರದು ಎಂದು ಸಿಎಂ, ಆರೋಗ್ಯ ಸಚಿವ, ಮುಖ್ಯ ಕಾರ್ಯದರ್ಶಿಗಳಿಗೆ ರಘಪತಿ ಭಟ್ ವಿನಂತಿ ಮಾಡಿದ್ದಾರೆ.


    ಕೋಲ, ನೇಮೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳಿಗೆ ಜನ ಕಂಕಣ ಬದ್ಧರಾಗಿದ್ದು, ಮುಹೂರ್ತ ನಿಗದಿಯಾಗಿದೆ ಎಲ್ಲಾ ಸಿದ್ಧತೆಗಳು ನಡೆದಿವೆ, ಈ ನಡುವೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ನಾನೊಬ್ಬ ಆಡಳಿತ ಪಕ್ಷದ ಸದಸ್ಯನಾಗಿ ಈ ಮಾತನ್ನು ಹೇಳುತ್ತಿದ್ದೇನೆ.

    ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದಿರುವುದು ಜನಪ್ರಿಯ ಸರಕಾರದ ಲಕ್ಷಣವಲ್ಲ. ಆದೇಶವನ್ನು ತಕ್ಷಣ ವಾಪಸು ಪಡೆಯಬೇಕು ಎಂದು ವಿನಂತಿಸಿದ್ದಾರೆ. ಕೋವಿಡ್ ನಿಯಮಾವಳಿಗಳನ್ನು ರೂಪಿಸಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ, ಬೇಕಾದರೆ ಭಾಗವಹಿಸುವ ಭಕ್ತರ ಸಂಖ್ಯೆಯನ್ನು ನಿಗದಿಪಡಿಸಿ ಎಂದ ಅವರು ಈಗಾಗಲೇ ರಾಜಕೀಯ ಕಾರ್ಯಕ್ರಮಗಳು ಅನಿವಾರ್ಯ ಅಲ್ಲದಿದ್ದರೂ ಅವಕಾಶ ಕೊಟ್ಟಿದ್ದೇವೆ ಎಂದ ಅವರು

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗೆ ಧಾರ್ಮಿಕ ಕಾರ್ಯಕ್ರಮಗಳು ಅತ್ಯಗತ್ಯವಾಗಿದ್ದು, ಜನಸಂದಣಿ ಗೆ ನಿಯಂತ್ರಣ ಹೇರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡಿ ಎಂದರು, ಅಲ್ಲದೆ ಹಿಂದುಳಿದ ಜನಾಂಗದವರೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ದುಡಿಯುತ್ತಾರೆ, ಇದರಿಂದಾಗಿ ಬಡ ಜನರಿಗೆ ಆರ್ಥಿಕ ಹೊಡೆತ ಬೀಳುತ್ತಿದ್ದು, ಕರಾವಳಿಯ ಜೀವನ ಪದ್ಧತಿಯನ್ನು ಅರ್ಥಮಾಡಿಕೊಳ್ಳಿ ಎಂದರು. ಇನ್ನು ಉಡುಪಿ ನಗರಕ್ಕೆ ನೈಟ್ ಕರ್ಪ್ಯೂ ನ ಅಗತ್ಯವೂ ಇಲ್ಲ, ಕೊರೋನ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರ ಅಲ್ಲ ಎಂದು ಅವರು ತಿಳಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *