KARNATAKA
ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಪತ್ತೆ

ದಾವಣಗೆರೆ ನವೆಂಬರ್ 03: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ.
ಕಳೆದ 5 ದಿನಗಳ ಹಿಂದೆ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಪೊಲೀಸರು ಪ್ರಕರಣದ ಬೆನ್ನತ್ತಿದ್ದರೂ ಕೂಡ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನಲ್ಲಿ ಚಂದ್ರಶೇಖರ್ ಶವ ಸಹ ಪತ್ತೆಯಾಗಿದೆ.