LATEST NEWS
ಚುನಾವಣಾ ನೀತಿ ಸಂಹಿತೆ ಎಫೆಕ್ಟ್ ಬಸ್ ನಲ್ಲಿ ಪ್ರಯಾಣಿಸಿದ ಶಾಸಕಿ ಶಕುಂತಲಾ ಶೆಟ್ಟಿ
ಚುನಾವಣಾ ನೀತಿ ಸಂಹಿತೆ ಎಫೆಕ್ಟ್ ಬಸ್ ನಲ್ಲಿ ಪ್ರಯಾಣಿಸಿದ ಶಾಸಕಿ ಶಕುಂತಲಾ ಶೆಟ್ಟಿ
ಮಂಗಳೂರು ಮಾರ್ಚ್ 27: ಚುನಾವಣಾ ನೀತಿ ಸಂಹಿತೆ ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿ ಅವರಿಗೂ ತಟ್ಟಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.
ಈ ಹಿನ್ನಲೆಯಲ್ಲಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಇಂದು ಪುತ್ತೂರಿನ ಬೆಟ್ಟಂಪಾಡಿ ಎಂಬಲ್ಲಿಗೆ ಕಾರ್ಯಕ್ರಮಕ್ಕೆ ತೆರಳಿದ್ದರು, ಕಾರ್ಯಕ್ರಮ ಮುಗಿಯುವ ಹೊತ್ತಿಗೆ ಚುನಾವಣೆ ದಿನಾಂಕ ಘೋಷಣೆಯಾಗಿತ್ತು, ಈ ಹಿನ್ನಲೆಯಲ್ಲಿ ಕಾರ್ಯಕ್ರಮ ಮುಗಿಸಿದ ಶಾಸಕಿ ಶಕುಂತಲಾ ಶೆಟ್ಟಿ ಸರಕಾರಿ ಕಾರನ್ನು ಬಿಟ್ಟು ಬಸ್ಸಿನಲ್ಲಿ ಪ್ರಯಾಣಿಸಿದರು.
You must be logged in to post a comment Login