LATEST NEWS
ಶಾಸಕರಾದ ತಕ್ಷಣ ಏನು ಬೇಕಾದರೂ ಮಾತನಾಡಬಹುದು ಎನ್ನುವುದು ಆಗಬಾರದು – ಟಿ ಆರ್ ಪಿ ಗಾಗಿ ಏನೇನೋ ಮಾತನಾಡುತ್ತಾರೆ

ಮಂಗಳೂರು ಎಪ್ರಿಲ್ 27: ಶಾಸಕರಾದ ತಕ್ಷಣ ಏನು ಬೇಕಾದರೂ ಮಾತನಾಡಬಹುದು ಎನ್ನುವುದು ಆಗಬಾರದು ಕೆಲವು ಶಾಸಕರಿಗೆ ಅದೊಂದು ಚಾಳಿಯಾಗಿಬಿಟ್ಟಿದೆ ತಮ್ಮ ಟಿ ಆರ್ ಪಿ ಗಾಗಿ ಏನೇನೋ ಮಾತನಾಡುತ್ತಾರೆ. ಶಾಸಕ ಮಿತ್ರರು ಹಕ್ಕುಚ್ಯುತಿಗೆ ದೂರು ಕೊಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಹಕ್ಕುಚ್ಯುತಿ ಕಮಿಟಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಯುಟಿ ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ವಿಧಾನಸಭೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿ ಆರು ತಿಂಗಳು ಅಮಾನತುಗೊಂಡ ಶಾಸಕರ ಅಮಾನತು ಹಿಂಪಡೆಯುವಂತೆ ಬಿಜೆಪಿ ನಿಯೋಗ ಮನವಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್ ಅಮಾನತು ಆದೇಶ ನನ್ನೊಬ್ಬನ ತೀರ್ಮಾನ ಅಲ್ಲ ಇಡೀ ಸದನದ ತೀರ್ಮಾನ. ಅಮಾನತು ಆದೇಶ ವಾಪಸ್ ತೆಗೆದುಕೊಳ್ಳುವ ಕುರಿತು ಚರ್ಚೆ ಮಾಡ್ತೇವೆ, ಈ ಬಗ್ಗೆ ನಾವು ಸಕಾರಾತ್ಮಕವಾಗಿದ್ದೇವೆ ಆದರೆ ಶಾಸಕರಿಗೆ ತಮ್ಮ ತಪ್ಪಿನ ಅರಿವಾಗಬೇಕು ಇದು ಶಿಕ್ಷೆ ಅಲ್ಲ ಸಂವಿಧಾನಬದ್ಧವಾಗಿ ನಡೆದುಕೊಳ್ಳಲು ಹಾಗೂ ಉತ್ತಮ ನಾಯಕರಾಗಲು ಅವರಿಗೆ ನೀಡಿದ ಸಮಯ ಅದನ್ನು ಅವರು ಅರ್ಥಮಾಡಿಕೊಳ್ಳಬೇಕು ಎಂದರು

ಶಾಸಕರಾದ ತಕ್ಷಣ ಏನು ಬೇಕಾದರೂ ಮಾತನಾಡಬಹುದು ಎನ್ನುವುದು ಆಗಬಾರದು ಕೆಲವು ಶಾಸಕರಿಗೆ ಅದೊಂದು ಚಾಳಿಯಾಗಿಬಿಟ್ಟಿದೆ ತಮ್ಮ ಟಿ ಆರ್ ಪಿ ಗಾಗಿ ಏನೇನೋ ಮಾತನಾಡುತ್ತಾರೆ ಜನರು ವೋಟ್ ಹಾಕಿದ ಕೂಡಲೇ ಅವರು ಶಾಸಕರಾಗಲ್ಲ ಸ್ಪೀಕರ್ ಎದುರು ಪ್ರಮಾಣವಚನ ಸ್ವೀಕರಿಸಿದ ಬಳಿಕವೇ ಆಗುವಂಥದ್ದು ನನ್ನ ಅರ್ಥ ಮಾಡಿಕೊಂಡು ಸಂವಿಧಾನಕ್ಕೆ ಅವರು ಗೌರವ ನೀಡಬೇಕಾಗುತ್ತದೆ ಸಂವಿಧಾನ ಪ್ರಕಾರವಾಗಿ ಮಾತನಾಡಬೇಕಾಗುತ್ತದೆ ಎಂದರು
ವಿಧಾನಸಭೆಯಿಂದ ಅಮಾನತುಗೊಂಡ ಬಳಿಕ ಸ್ಪೀಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಹಕ್ಕು ಬಾಧ್ಯತಾ ಸಮಿತಿಗೆ ಐದಾರು ಶಾಸಕರು ದೂರು ನೀಡಿದ್ದಾರೆ. ಈ ಸಮಿತಿಯು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಅದು ಆ ಕಮಿಟಿಗೆ ಬಿಟ್ಟ ವಿಚಾರ ಎಂದರು.