Connect with us

    LATEST NEWS

    ಕರಾವಳಿ ಜಿಲ್ಲೆಗಳ ಖಾಸಗಿ ಬಸ್ ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

    ಉಡುಪಿ ಮೇ 30 : ಕಾಂಗ್ರೇಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸರಕಾರಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತೊಂದು ಮನವಿ ಮಾಡಿದ್ದು, ಕರಾವಳಿ ಜಿಲ್ಲೆಗಳಲ್ಲಿರುವ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


    ಈ ಬಗ್ಗೆ ಟ್ವೀಟ್ ಮಾಡಿ ಒತ್ತಾಯಿಸಿದ ಸುನಿಲ್ ಕುಮಾರ್, “ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು” ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply