Connect with us

LATEST NEWS

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊರೊನಾ ಸೊಂಕು ದೃಢ

ಮಂಗಳೂರು: ಮೂಡಬಿದ್ರೆ ಶಾಸಕ ಉಮನಾಥ ಕೋಟ್ಯಾನ್ ಅವರಿಗೆ ಇಂದು ಕೊರೊನಾ ಪಾಸಿಟಿವ್ ಆಗಿದೆ. ಕೊರೊನಾ ಪಾಸಿಟಿವ್ ದೃಢಪಟ್ಟಿರುವುದನ್ನು ಟ್ವೀಟ್ ಮೂಲಕ ಅವರು ತಿಳಿಸಿದ್ದಾರೆ.


ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ದೇವರ ಅನುಗ್ರಹ ಹಾಗೂ ನಿಮ್ಮ ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿದ್ದಾರೆ.


ಈಗಾಗಲೇ ಜಿಲ್ಲೆಯಲ್ಲಿ ಮೂವರು ಶಾಸಕರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿತ್ತು. ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆ. ಇದಕ್ಕೆ ಮೊದಲು ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜಾ, ಅಂಗಾರ ಅವರಿಗೂ ಕೊರೊನಾ ದೃಢಪಟ್ಟಿತ್ತು. ಇದೀಗ ಉಮನಾಥ ಕೋಟ್ಯಾನ್ ಅವರಿಗೂ ಕೊರೊನಾ ದೃಢಪಟ್ಟಿದೆ.

Facebook Comments

comments