ಮೂಡಬಿದ್ರೆ ತಹಶಿಲ್ದಾರ್ ಕಚೇರಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಉಮಾನಾಥ ಕೋಟ್ಯಾನ್

ಮಂಗಳೂರು ಜುಲೈ 1:ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಮೂಡಬಿದ್ರೆ ತಹಶಿಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಮೂಡಬಿದ್ರೆ ತಹಶಿಲ್ದಾರ್ ಕಚೇರಿಯಲ್ಲಿರುವ ಸಿಬ್ಬಂದಿಗಳು ಸಾರ್ವಜನಿಕರಿಗೆ ಕೆಲಸ ಮಾಡದೇ ನಿರ್ಲಕ್ಷವಹಿಸುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಇಂದು ತಹಶಿಲ್ದಾರ್ ಕಚೇರಿಗೆ ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಕಚೇರಿಯಲ್ಲಿ ಕೆಲಸ ಮಾಡದ ಸಿಬ್ಬಂದಿಗಳನ್ನು ಶಾಸಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕೆಲಸ ಮಾಡದ ಸಿಬ್ಬಂದಿಗಳಿಗೆ ಕೊನೆಯ ವಾರ್ನಿಂಗ್ ನೀಡಿದರು.

VIDEO

Facebook Comments

comments