Connect with us

    DAKSHINA KANNADA

    ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಬೆಂಬಲಿಸಿ- ಶಾಸಕ ಉಮಾನಾಥ್ ಕೋಟ್ಯಾನ್ ಕರೆ..!

    ಮಂಗಳೂರು : ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಮುದಾಯಕ್ಕೆ ಕರೆ ನೀಡಿದ್ದಾರೆ.

    ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್ ಉಳಿದ ಪಕ್ಷದ ಸಮುದಾಯ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ.ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದರು. ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ ಎಂದರು. ಕಳೆದ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿ‌ ರಕ್ಷಿತ್ ಶಿವರಾಂ ಸೋಲು, ಉಳ್ಳಾದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಕೂಡ ಉಮಾನಾತ್ ಕೋಟ್ಯಾನ್ ಮಾತನಾಡಿ ಬೇಸರ ವ್ಯಕ್ತಪಡಿಸಿದರು. ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ.ಕಾಂಗ್ರೆಸ್​ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತೆ ಎಂಬ ಭಯ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ?  ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಕರೆ ನೀಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply