LATEST NEWS
29 ಲಕ್ಷ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
29 ಲಕ್ಷ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
ಮಂಗಳೂರು ಅಕ್ಟೋಬರ್ 10: ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಜಯನಗರದಲ್ಲಿ 29 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ನಿನ್ನೆ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಬೇಡಿಕೆಯಂತೆ ಈ ರಸ್ತೆಯನ್ನು 29 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದೆ ಎಂದರು.
ಕ್ಷೇತ್ರವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿಕೊಂಡು ಮುಂಬರುವ ದಿನಗಳಲ್ಲಿ ಕುಂದು ಕೊರತೆಗಳಿಲ್ಲದಂತೆ ಮಾದರಿ ಕ್ಷೇತ್ರವಾಗಿ ರೂಪಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸುವ ಸಂಕಲ್ಪದೊಂದಿಗೆ, ಸಾರ್ವಜನಿಕರ ಜೊತೆಯಲ್ಲೇ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ ಎಂದರು.