Connect with us

    LATEST NEWS

    ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೂತನ ಅಧಿಕೃತ ಸರಕಾರಿ ಕಚೇರಿ ಉದ್ಘಾಟನೆ

    ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೂತನ ಅಧಿಕೃತ ಸರಕಾರಿ ಕಚೇರಿ ಉದ್ಘಾಟನೆ

    ಮಂಗಳೂರು ಸೆಪ್ಟೆಂಬರ್ 12: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೂತನ ಕಚೇರಿ ಲಾಲ್ ಭಾಗ್ ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ಬುಧವಾರ ಉದ್ಘಾಟನೆಗೊಂಡಿತು.

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ವೇದವ್ಯಾಸ ಕಾಮತ್ ಅವರ ಹೆತ್ತವರಾದ ಉದ್ಯಮಿ ಡಿ ವಾಮನ ಕಾಮತ್ ಹಾಗೂ ತಾರಾ ವಿ ಕಾಮತ್ ಕಚೇರಿ ಉದ್ಘಾಟಿಸಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಈ ಹಿಂದೆ ಖಾಸಗಿ ಕಚೇರಿಯ ಮೂಲಕ ಜನರ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ.

    ಈಗ ಹೊಸ ಕಚೇರಿಯ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುವ ಜತೆಗೆ ಪರಿಹಾರ ನೀಡುವ ಕಾರ್ಯ ತ್ವರಿತಗತಿಯಲ್ಲಿ ನಡೆಸಲು ಸಾಧ್ಯವಾಗಲಿದೆ. ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುವ ಮೂಲಕ ಮಂಗಳೂರು ನಗರದ ಅಭಿವೃದ್ಧಿಗೆ ಮತ್ತಷ್ಟು ದುಡಿಯಲು ಅವಕಾಶ ಸಿಗುತ್ತದೆ. ಸಾರ್ವಜನಿಕರು ಕಚೇರಿಗೆ ಬಂದು ತಮ್ಮ ಸಮಸ್ಯೆ ಅಹವಾಲುಗಳನ್ನು ಸಲ್ಲಿಸಬಹುದು ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *