LATEST NEWS
ಕೋವಿಡ್ ನಿಯಮ ಉಲ್ಲಂಘಿಸಿದವರ ಮೇಲೆ ದಾಖಲಾದ ದೂರು ಹಿಂಪಡೆಯಲು ಮನವಿ

ಮಂಗಳೂರು ಅಕ್ಟೋಬರ್ 2: ಲಾಕ್‌ಡೌನ್ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಹಲವರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆಯುವಂತೆ ಶಾಸಕ ವೇದವ್ಯಾಸ ಕಾಮತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದ ಅವರು, ‘ದೇಶದಲ್ಲಿ ಕೋವಿಡ್–2019ನಿಂದ ಜನರು ಆರ್ಥಿಕ, ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ನ್ಯಾಯಾಲಯ, ಕಚೇರಿ ಅಲೆದಾಟ ಮತ್ತಷ್ಟು ಸಮಸ್ಯೆ ಸೃಷ್ಟಿಸುತ್ತಿದೆ. ಹೀಗಾಗಿ, ಸಾರ್ವಜನಿಕರ ಮೇಲೆ ದಾಖಲಾಗಿರುವ ಎಲ್ಲ ದೂರುಗಳನ್ನು ಹಿಂತೆಗೆಯಲು ಆದೇಶ ನೀಡಬೇಕು ಎಂದು ಮನವಿಯಲ್ಲಿ ಅವರು ಕೋರಿದ್ದಾರೆ.
