ವೆನ್ ಲಾಕ್ ಆಸ್ಪತ್ರೆಗೆ ಶಾಸಕ ಕಾಮತ್ ಧೀಡಿರ್ ಭೇಟಿ

ಮಂಗಳೂರು ಜೂನ್ 11: ವೆನ್ ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಧೀಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ತಾಕೀತು ಮಾಡಿದರು.

631 Shares

Facebook Comments

comments