DAKSHINA KANNADA
ಪಾರ್ಟಿಯ ತುಂಡು ನಾಯಕರ ಮಾತು ಕೇಳಿ ಶಾಸಕರ ಹಕ್ಕುಚ್ಯತಿ ಮಾಡಲಾಗುತ್ತಿದೆ: ನಳಿನ್ ಕುಮಾರ್ ಕಟೀಲ್
ಮಂಗಳೂರು, ಆಗಸ್ಟ್ 14: ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರ ಧರಣಿ ವಿಚಾರವಾಗಿ ಜಿಲ್ಲಾಧಿಕಾರಿ ನೀಡಿದ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಧರಣಿ ಕೈ ಬಿಟ್ಟ ಘಟನೆ ನಡೆದಿದೆ.
ಧರಣಿ ಕೈ ಬಿಟ್ಟ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡ್ತಾ ಇದೆ. ಶಾಸಕರ ಹಕ್ಕುಗಳ ಚ್ಯುತಿ ಮಾಡುವ ಕೆಲಸ ಆಗ್ತಿದೆ. ಒಂದು ಪಕ್ಷದ ಕೆಲ ನಾಯಕರ ಮಾತು ಕೇಳಿ ಚ್ಯುತಿ ಮಾಡಲಾಗ್ತಿದೆ.
ಮೂಡಬಿದ್ರೆಯ ಇರುವೈಲ್ ಹಾಗೂ ಬಂಟ್ವಾಳದಲ್ಲಿ ಘಟನೆ ನಡೆದಿದೆ. ಅಧಿಕಾರಿಗಳು ಶಿಷ್ಟಾಚಾರ ಪ್ರಕಾರ ಆಮಂತ್ರಣ ಕೊಟ್ಟಿದ್ದಾರೆ. ಆದರೆ ಡಿಸಿ ಕಚೇರಿಯಿಂದ ಏಕಾಏಕಿ ಕಾರ್ಯಕ್ರಮ ರದ್ದು ಮಾಡಲಾಗಿದೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವರ ಹೆಸರಿಲ್ಲ ಅಂತ ರದ್ದು ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಹಾಕಲಾಗಿದೆ, ಸ್ಪೀಕರ್, ಪರಿಷತ್ ಸದಸ್ಯರ ಹೆಸರೂ ಇತ್ತು, ಬಿಜೆಪಿಯ ಆರೂ ಶಾಸಕರ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡಲಾಗ್ತಿದೆ. ಜಿಲ್ಲಾಧಿಕಾರಿಗಳು ಇವತ್ತು ಬಂದು ಭರವಸೆ ಕೊಟ್ಟು ವಿನಂತಿ ಮಾಡಿದ್ದಾರೆ.ಹೀಗಾಗಿ ನಾವು ಈಗ ಧರಣಿ ವಾಪಸ್ ತೆಗೋತಿವಿ, ಇವತ್ತು ಸಂಜೆಯೊಳಗೆ ಅಮಾನತು ಆದೇಶ ವಾಪಸ್ ಪಡೆಯಬೇಕು, ಇಲ್ಲದೇ ಇದ್ದರೆ ನಾವು ನಾಳೆ ಮತ್ತೆ ಪ್ರತಿಭಟನೆ ಮಾಡ್ತೇವೆ ಎಂದುಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.