Connect with us

    LATEST NEWS

    ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಹೆಸರಲ್ಲಿ ರಘುಪತಿ ಭಟ್ ಚುನಾವಣಾ ಕಚೇರಿ ಉದ್ಘಾಟನೆ

    ಉಡುಪಿ ಮೇ 15: ಬಿಜೆಪಿ ಪಕ್ಷಕ್ಕೆ ಕರಾವಳಿಯಲ್ಲಿ ಬಂಡಾಯದ ಬಿಸಿ ಜೋರಾಗಿಯೇ ಬೀಸುತ್ತಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದ ರಘುಪತಿ ಭಟ್ ಇದೀಗ ತಮ್ಮ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದ್ದಾರೆ.

    ಕರಂಬಳ್ಳಿಯ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಎಂಬ ಹೆಸರಿನಲ್ಲಿ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದ ಅವರು ಕಾರ್ಯಕರ್ತರ ಸಮಾವೇಶವನ್ನು ನಡೆಸಿದರು. ಈ ವೇಳೆ ಮಾತನಾಡಿದ ಅವರು ಹಿಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ನಿರಾಕರಿಸಲು ಯಾರು ಏನು ಮಾಡಿದರು ಎಂಬುದು ನನಗೆ ತಿಳಿದಿದೆ. ಕಾಂಗ್ರೆಸ್ ಕೂಡ ಸ್ವತಂತ್ರವಾಗಿ ಸ್ಪರ್ಧಿಸುವಂತೆ ಒತ್ತಡ ಹೇರಿತ್ತು. ಈಗ ಬಿಜೆಪಿಯಲ್ಲಿ ಹೊಸಬರಿಗೆ ಅವಕಾಶ ನೀಡಿ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಬಾರಿ ಪಕ್ಷದ ಎಲ್ಲಾ ಕಟ್ಟುಪಾಡು, ಸಂಪ್ರದಾಯಗಳನ್ನು ಮುರಿದಿದ್ದಾರೆ. ಧನಂಜಯ್ ಸರ್ಜಿ ಅವರ ಬಗ್ಗೆ ನನಗೆ ಸಂಪೂರ್ಣ ಗೌರವವಿದೆ. ಆದರೆ ಅವರು ಕೇವಲ ಒಂದು ವರ್ಷದ ಹಿಂದೆ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಭಾಗವಹಿಸಿದ್ದರು. ಮತದಾರರೇ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ನನಗೆ ಅದನ್ನು ತಿಳಿಸಿದರು.

    ನಾನು ಬಿಜೆಪಿ ಪಕ್ಷದ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿದ್ದೇನೆ. ಸೋತರೂ ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ನಾನು ಸಾಯುವಾಗ ನನ್ನ ಪಾರ್ಥಿವ ಶರೀರದ ಮೇಲೆ ಬಿಜೆಪಿ ಧ್ವಜ ಇರಬೇಕು ಎಂದರು. ಪಕ್ಷಾತೀತವಾಗಿ ಚುನಾವಣಾ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಜನರು ಆಗಮಿಸಿದ್ದರು. ನಾಳೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *