LATEST NEWS
ವಿಧಾನ ಪರಿಷತ್ ಚುನಾವಣ ಕಣದಿಂದ ಹಿಂದೆ ಸರಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು ನವೆಂಬರ್ 20: ಕರಾವಳಿಯಲ್ಲಿ ರಾಜಕೀಯ ತಲ್ಲಣ ಸೃಷ್ಠಿಸಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಅವರ ವಿಧಾನ ಪರಿಷತ ಸ್ಪರ್ಧೆ ವಿಷಯ ಇದೀಗ ತಣ್ಣಗಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದ ಸಹಕಾರಿ ರಂಗದ ದಿಗ್ಗಜ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ಪರ್ಧಾಕಣದಿಂದ ಹಿಂದಕ್ಕೆ ಸರಿಯುವುದಾಗಿ ಘೋಷಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆಯಿಂದ ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ದೂರ ಉಳಿಯುವುದಾಗಿ ಡಾ ಎಂ. ಎನ್. ರಾಜೇಂದ್ರ ಕುಮಾರ್ ದೂರ ಸರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ನಿನ್ನೆ ನಡೆದ ಬಿಜೆಪಿ ಜನಸ್ವರಾಜ್ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಸೋಮಶೇಖರ ಅವರು ರಾಜೇಂದ್ರ ಕುಮಾರ ವಿರುದ್ದ ವಾಗ್ದಾಳಿ ನಡೆಸಿದ್ದು, ಎಸ್ ಸಿಡಿಸಿಸಿ ಬ್ಯಾಂಕ್ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಮಾಡುವುದಾಗಿ ಘೋಷಿಸಿದ್ದರು.
ಎಸ್‌ಸಿಡಿಸಿಸಿ ಬ್ಯಾಂಕನಲ್ಲಿ ನವೋದಯ ಟ್ರಸ್ಟ್ ಗೆ ಅವಕಾಶ ನೀಡಿರುವುದು, ಪ್ರತಿ ತಿಂಗಳು ಡಿಸಿಸಿ ಬ್ಯಾಂಕ್ ನಿಂದ ಟ್ರಸ್ಟ್ ಗೆ ₹19 ಲಕ್ಷ ವರ್ಗಾವಣೆ ಮಾಡಿರುವುದು ಕಾನೂನುಬಾಹಿರ. ಈ ಬಗ್ಗೆ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ರಾಜೇಂದ್ರಕುಮಾರ ಕಣದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ.