LATEST NEWS
ವಿಧಾನ ಪರಿಷತ್ ಉಪ ಚುನಾವಣೆ ಮತದಾನ – ಮತ ಚಲಾಯಿಸಿದ ಸ್ಪೀಕರ್ ಖಾದರ್, ಶಾಸಕ ಭರತ್ ಶೆಟ್ಟಿ
ಮಂಗಳೂರು ಅಕ್ಟೋಬರ್ 21: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಿನಿಂದ ಖಾಲಿಯಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದ್ದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಬೆಳಿಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಿದೆ.
ವಿಧಾನಸಭೆ ಸ್ಪೀಕರ್ ಖಾದರ್ ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇನ್ನು ಶಾಸಕರಾದ ಡಾ . ಭರತ್ ಶೆಟ್ಟಿ ವೈ ಅವರು ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿರುವ ಬೂತ್ ನಲ್ಲಿ ಮತ ಚಲಾಯಿಸಿದರು.ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಹಾಗೂ ಸದಸ್ಯರು ಹಾಜರಿದ್ದು, ಶಾಸಕರೊಂದಿಗೆ ಮತ ಚಲಾಯಿಸಿದರು.
ಈ ಸಂದರ್ಭ ಮಾತನಾಡಿದ ಡಾ . ಭರತ್ ಶೆಟ್ಟಿ ವೈ ಅವರು ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ಸ್ಪರ್ಧಿಸುತ್ತಿದ್ದು ಅತ್ಯಧಿಕ ಮತದೊಂದಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.ಕೋಟ ಶ್ರೀನಿವಾಸ ಪೂಜಾರಿಯವರು ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕರಾಗಿ, ಸಚಿವರಾಗಿ ಉಭಯ ಜಿಲ್ಲೆಯಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.ವಿಶೇಷವಾಗಿ ಗ್ರಾಮ ಪಂಚಾಯತ್ ಜಿಲ್ಲಾ ಪಂಚಾಯತ್ ವ್ಯಾಪ್ತಿಗಳಲ್ಲಿ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನುದಾನಗಳನ್ನ ಬಿಡುಗಡೆ ಮಾಡಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಕೊಡುಗೆ ನೀಡಿದ್ದಾರೆ.ಹೀಗಾಗಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.