Connect with us

    LATEST NEWS

    ಅಮಿತ್ ಶಾ ಮಂಗಳೂರಿಗೆ ಬಂದರೆ ಉಪವಾಸ ಸತ್ಯಾಗ್ರಹ – ಐವನ್ ಡಿಸೋಜಾ

    ಅಮಿತ್ ಶಾ ಮಂಗಳೂರಿಗೆ ಬಂದರೆ ಉಪವಾಸ ಸತ್ಯಾಗ್ರಹ – ಐವನ್ ಡಿಸೋಜಾ

    ಮಂಗಳೂರು ಜನವರಿ 6: ಜನವರಿ 19ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿರುವ ಪೌರತ್ವ ಕಾಯಿದೆ ಪರವಾಗಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಅವಕಾಶ ನೀಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.

    ಮಂಗಳೂರಿನಲ್ಲಿ ಮಾತನಾಡಿದ ಅವರು ಡಿಸೆಂಬರ್ 19 ರ ನಂತರ ಜಿಲ್ಲೆಯಲ್ಲಿ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ. ಈ ಹಿನ್ನಲೆಯಲ್ಲಿ ಮಂಗಳೂರಿಗೆ ಅಮಿತ್ ಶಾ ಬಂದರೆ ಮತ್ತೆ ಶಾಂತಿ ಕದಡಬಹುದು ಮತ್ತೆ ಅಶಾಂತಿಗೆ ಕಾರಣವಾಗಬಹುದು ಎಂದು ಆರೋಪಿಸಿದರು.

    ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಷಾ ಸಭೆಗೆ ಅನುಮತಿ ಕೊಡಬಾರದು ಹಾಗೂ ಅಮಿತ್ ಷಾ ಮಂಗಳೂರಿನ ಸಭೆಯನ್ನು ಮುಂದಕ್ಕೆ ಹಾಕಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಜಿಲ್ಲಾಡಳಿತ ಸಭೆಗೆ ಅವಕಾಶ ನೀಡಿ, ಅಮಿತ್ ಷಾ ಮಂಗಳೂರಿಗೆ ಬಂದರೆ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *