ಸ್ಥಳೀಯ ಶಾಸಕರ ಕಡೆಗಣನೆ ಉಡುಪಿ ಜಿಲ್ಲಾಧಿಕಾರಿಗೆ ಪತ್ರದ ಮೂಲಕ ಎಚ್ಚರಿಕೆ

ಉಡುಪಿ ಜನವರಿ 26 : ಉಡುಪಿಯಲ್ಲಿ ನಡೆದ ಸರಕಾರಿ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರನ್ನು ಆಹ್ವಾನಿಸದೇ ಶಿಷ್ಟಾಚಾರ ಪಾಲಿಸದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಗೆ ಅವರಿಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಗುರುವಾರ ನಡೆದಿದ್ದ ಸರ್ಕಾರಿ ಕಾರ‌್ಯಕ್ರಮಕ್ಕೆ ಶಾಸಕ ರಘುಪತಿ ಭಟ್ ಅವರನ್ನು ಆಹ್ವಾನಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ರಾಜಕೀಯ ಕಾರಣಗಳಿಗಾಗಿ ಸರ್ಕಾರಿ ಕಾರ್ಯಕ್ರಮಗಳಿಗೆ ಸ್ಥಳೀಯ ಶಾಸಕರನ್ನು ಆಹ್ವಾನಿಸದೆ ಅಪಮಾನ ಮಾಡಿದರೆ ಅಂತಹ ಪ್ರಕರಣ ಶಾಸಕರ ಹಕ್ಕುಚ್ಯುತಿ ವ್ಯಾಪ್ತಿಯೊಳಗೆ ಬರುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.

ಅಲ್ಲದೆ ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಲು ಕಾರಣವೇನು ಅಲ್ಲದೆ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸದಿರುವ ಬಗ್ಗೆ ನಿಮ್ಮ ನಿಲುವು ಎನು ಎಂದು ನನಗೆ ಲಿಖಿತವಾಗಿ ಉತ್ತರಿಸಬೇಕೆಂದು ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದಾರೆ.

ಅವರ ಉತ್ತರ ನೋಡಿ ಮುಂದಿನ ನಡೆ ನಿರ್ಧರಿಸಲಾಗುವುದು ಎಂದು ಶ್ರೀನಿವಾಸ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2 Shares

Facebook Comments

comments