DAKSHINA KANNADA
ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು ಫೆಬ್ರವರಿ 18: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಸಂಪರ್ಕ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲೆಯ ಎಲ್ಲಾ ಶಾಸಕರು, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಹಿಲನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
