LATEST NEWS
ಎಂ.ಎನ್. ರಾಜೇಂದ್ರ ಕುಮಾರ್, ಸದಾಶಿವ ಶೆಟ್ಟಿ ಕನ್ಯಾನ, ರೋಹನ್ ಮೊಂತೆರೊ ಗೆ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್

ಮಂಗಳೂರು ಮಾರ್ಚ್ 28: ಮಂಗಳೂರು ವಿಶ್ವವಿದ್ಯಾನಿಲಯ ಕೊಡ ಮಾಡುವ ಗೌರವ ಡಾಕ್ಟರೇಟ್ ಗೆ ಈ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಹೇರಂಭಇಂಡಸ್ಟ್ರೀಸ್ ಮಾಲೀಕ, ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ, ಉದ್ಯಮಿ ರೋಹನ್ ಮೊಂತೆರೊ ಆಯ್ಕೆಯಾಗಿದ್ದಾರೆ.
ಮಾರ್ಚ್ 29 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯುವ ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಘಟಿಕೋತ್ಸವದಲ್ಲಿ 64 ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಅವರಲ್ಲಿ 33 ಮಹಿಳೆಯರು, 31 ಪುರುಷರು, ಮೂವರು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಇದ್ದಾರೆ. 54 ಚಿನ್ನದ ಪದಕ, 56 ನಗದು ಬಹುಮಾನಗಳು ಇವೆ. ಸ್ನಾತಕ, ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ ಒಟ್ಟು 127 ರ್ಯಾಂಕ್‌ಗಳಲ್ಲಿ ಪ್ರಥಮ ಬ್ಯಾಂಕ್ ಪಡೆದ 67 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಕುಲಸಚಿವ (ಪರೀಕ್ಷಾಂಗ) ದೇವೇಂದ್ರಪ್ಪ ಎಚ್. ಹೇಳಿದರು.