LATEST NEWS
ಮಲತಂದೆಯಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ…!!

ಮಂಗಳೂರು ಜುಲೈ 27: 9 ವರ್ಷದ ಬಾಲಕಿ ಮೇಲೆ ಮಲತಂದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಯನ್ನು ಅಶ್ವತ್ಥ್ (25) ಎಂದು ಗುರುತಿಸಲಾಗಿದ್ದು. ಈತ ಪತಿಯನ್ನು ತ್ಯಜಿಸಿರುವ ಮಹಿಳೆಯನ್ನು ಮದುವೆಯಾಗಿದ್ದ. ಈಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ವೇಳೆ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದು, ವಿಪರೀತ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ.
