LATEST NEWS
ಗುಂಪು ಹ*ಲ್ಲೆ ನಡೆಸಿ ಕೊಲೆ ಪ್ರಕರಣ – ಬಿಜೆಪಿ ಮಾಜಿ ಕಾರ್ಪೊರೇಟರ್ ಪತಿಯನ್ನು ಅರೆಸ್ಟ್ ಮಾಡುವಂತೆ ಎಸ್ ಡಿಪಿಐ ಒತ್ತಾಯ

ಮಂಗಳೂರು ಎಪ್ರಿಲ್ 30: ಮಂಗಳೂರಿನ ಕುಡುಪುವಿನಲ್ಲಿ ಕೇರಳ ಮೂಲದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೊರೇಟರ್‌ರ ಪತಿಯನ್ನು ಬಂಧಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬುಧವಾರ ಒತ್ತಾಯಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಡಿಪಿಐ ನಾಯಕ ಜಲೀಲ್ ಕೃಷ್ಣಾಪುರ, “ಮುಸ್ಲಿಂ ಯುವಕನ ಹತ್ಯೆ ಪ್ರಕರಣದಲ್ಲಿ ಮಾಜಿ ಸ್ಥಳೀಯ ಬಿಜೆಪಿ ಕಾರ್ಪೊರೇಟರ್ ಸಂಗೀತಾ ನಾಯಕ್ ಅವರ ಪತಿ ರವೀಂದ್ರ ನಾಯಕ್ ಭಾಗಿಯಾಗಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಆರ್‌ಎಸ್‌ಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದೆಯೇ? ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರಾಲ್ ಗುಂಪು ಹತ್ಯೆಯನ್ನು ಒಂದು ಸಣ್ಣ ವಿಷಯವೆಂದು ಹೇಳಿದ್ದಾರೆ. ಆದರೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಗೃಹ ಸಚಿವರು ಆರೋಪಿಗಳ ಪರವಾಗಿ ಹೇಳಿಕೆ ನೀಡುತ್ತಿದ್ದಾರೆ. ಆಧಾರರಹಿತ ಹೇಳಿಕೆ ನೀಡಿದ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದರು.