LATEST NEWS
ಕೋಟ – ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು
ಕೋಟ ಅಕ್ಟೋಬರ್ 30 : ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಮೃತ ಯುವಕನನ್ನು ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ ಪ್ರಮೋದ್ ಶೆಟ್ಟಿ ( 24) ಎಂದು ಗುರುತಿಸಲಾಗಿದೆ. ಈತ ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಪ್ರಮೋದ್ ಬಡ ಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
You must be logged in to post a comment Login