KARNATAKA
ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಸ್ಟೋರ್ ಮಾಡಿದರೆ ಕ್ರಿಮಿನಲ್ ಕೇಸ್
ಬೆಂಗಳೂರು, ಮೇ 07: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇದೀಗ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಎಸ್ಐಟಿ ಖಡಕ್ ವಾರ್ನಿಂಗ್ ಕೊಟ್ಟಿದೆ. ಅಲ್ಲದೆ ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ ಒಂದು ವೇಳೆ ನೀವು ಡಿಲೀಟ್ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ ಯಾವದೇ ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.