Connect with us

    LATEST NEWS

    ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

    ನವದೆಹಲಿ: ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಮೋದಿ ರಾಣಿ 2ನೇ ಎಲಿಜಬೆತ್ ನಿಧನದಿಂದ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ.


    ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಮ್ಮ ಕಾಲದ ಧೀಮಂತ ನಾಯಕಿಯಾಗಿ ಸದಾ ನೆನಪಿನಲ್ಲುಳಿಯಲಿದ್ದಾರೆ. ಅವರು ತಮ್ಮ ದೇಶದ ಜನರಿಗೆ ಸ್ಫೂರ್ತಿದಾಯಕ ನಾಯಕತ್ವವನ್ನು ನೀಡಿದ್ದರು. ಸಾರ್ವಜನಿಕ ಜೀವನದಲ್ಲಿ ಘನತೆ ಮತ್ತು ಸಭ್ಯತೆಯಿಂದ ಇದ್ದವರು. ಅವರ ಕುಟುಂಬದ ಮತ್ತು ಬ್ರಿಟನ್‌ ಜನರ ಈ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ, ಅವರ ಜತೆ ನಾವಿದ್ದೇವೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply