ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಮಂಗಳೂರಿನಲ್ಲಿ ದೇವರ ಮೊರೆ ಹೋದ ಮೋದಿ ಭಕ್ತರು

ಮಂಗಳೂರು,ಫೆಬ್ರವರಿ 11 : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತೆ ದೇಶದ ಆಡಳಿತದ ಚುಕ್ಕಾಣಿ ಹಿಡಿಯಬೇಕೆಂಬ ಆಸೆ ಬಹು ಜನರದ್ದು,ಈ ಹಿನ್ನೆಲೆಯಲ್ಲಿ  ಅವರ ಆರೋಗ್ಯ, ಕ್ಷೇಮಾಭಿವೃದ್ಧಿಗಾಗಿ ಪ್ರಧಾನಿ ಮೋದಿ ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.ಮಂಗಳೂರಿನ ಹಿಂದೂ ಸಂರಕ್ಷಣಾ ಸಮಿತಿ ಯ ನೇತ್ರತ್ವದಲ್ಲಿ ನಗರದ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಯವರ ಆರೋಗ್ಯ, ಕ್ಷೇಮಾಭಿವೃದ್ಧಿ ,ಹಾಗೂ ಮುಂದಿನ ರಾಜಕೀಯ ಜೀವನವು ಸುಗಮವಾಗಿ ಸಾಗಲಿ ಎಂಬ ಬೇಡಿಕೆಯನ್ನಿಟ್ಟು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಏಕ ರುದ್ರ ಪೂಜೆ ಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಆರೋಗ್ಯ, ಕ್ಷೇಮಾಭಿವೃದ್ಧಿ ,ಹಾಗೂ ಮುಂದಿನ ರಾಜಕೀಯ ಜೀವನವು ಸುಗಮವಾಗಿ ಸಾಗಲಿ ಎಂದು ಶ್ರೀ ಮಂಜುನಾಥನಲ್ಲಿ ಪ್ರಾರ್ಥಿಸಲಾಯಿತು .