Connect with us

    LATEST NEWS

    ಈ ಬಾರಿಯ ರಕ್ಷಾಬಂಧನವನ್ನು ಮುಸ್ಲಿಂ ಮಹಿಳೆಯರೊಂದಿಗೆ ಆಚರಿಸಿ – ಬಿಜೆಪಿ ಮುಖಂಡರಿಗೆ ಪ್ರಧಾನಿ ಮೋದಿ ಕರೆ

    ನವದೆಹಲಿ ಅಗಸ್ಟ್ 1 : ಲೋಕಸಭೆ ಚುನಾವಣೆ ಹತ್ತಿ ಬರುತ್ತಿದ್ದಂತೆ ಇದೀಗ ಮುಸ್ಲಿಂ ಮಹಿಳೆಯರ ಓಲೈಕೆಗೆ ಬಿಜೆಪಿ ಮುಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆುಿ ಮುಖಂಡರಿಗೆ ಮುಂಬರುವ ರಕ್ಷಾಬಂಧನವನ್ನು ಮುಸ್ಲಿಂ ಮಹಿಳೆಯರೊಂದಿಗೆ ಆಚರಿಸಿ ಎಂದು ಕರೆ ನೀಡಿದ್ದಾರೆ.


    2024ರ ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರ ರಾತ್ರಿ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರ ಸಭೆಯನ್ನು ನಡೆಸಿದ್ದು, ಈ ವೇಳೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.

    ಸಮಾಜದ ಪ್ರತಿಯೊಂದು ವರ್ಗದವರೊಂದಿಗೆ ಸಂಪರ್ಕ ಸಾಧಿಸುವುದು ಅತ್ಯಗತ್ಯ. ಮುಸ್ಲಿಂ ಪುರುಷರು ತಮ್ಮ ಪತ್ನಿಯರಿಗೆ ತ್ವರಿತವಾಗಿ ನೀಡುವ ವಿಚ್ಛೇದನದ ಪದ್ಧತಿಯನ್ನು ಈ ಸರ್ಕಾರ ಅಪರಾಧ ಎಂದು ಪರಿಗಣಿಸಿದೆ. ಈ ನಿರ್ಧಾರ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚಿನ ಧೈರ್ಯ ತುಂಬಿದೆ. ಈ ಬಾರಿಯ ರಕ್ಷಾ ಬಂಧನದ ಸಮಯದಲ್ಲಿ ಈ ಅಲ್ಪಸಂಖ್ಯಾತ ಮಹಿಳೆಯರನ್ನು ತಲುಪುವ ಕೆಲಸ ಆಗಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಕೆಲ ಸಂಸದರಿಗೆ ಸೂಚನೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply