MANGALORE
ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ವಿಶ್ವಹಿಂದೂಪರಿಷತ್ ನಿಂದ ಪಾದಯಾತ್ರೆ

ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ವಿಶ್ವಹಿಂದೂ ಪರಿಷತ್ ನಿಂದ ಪಾದಯಾತ್ರೆ
ಪುತ್ತೂರು ಅಗಸ್ಟ್ 5: ಪ್ರಧಾನಿ ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾದಬೇಕೆಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಘಟಕ ಕಲ್ಲಡ್ಕ ವಲಯದ ವತಿಯಿಂದ ಕಲ್ಲಡ್ಕ ಶ್ರೀ ರಾಮ ಮಂದಿರ ದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ಸನ್ನಿದಾನಕ್ಕೆ ಕಾಲ್ನಡಿಗೆ ಯಲ್ಲಿ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಇದಕ್ಕೂ ಮುನ್ನ ಕಲ್ಲಡ್ಕ ಶ್ರೀ ರಾಮ ಭಜನಾ ಮಂದಿರ ದಲ್ಲಿ ಭಜನೆ ನಡೆಸಿ ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾತ್ರಿ ಒಂಬತ್ತು ಗಂಟೆ ಯ ವೇಳೆಗೆ ಕಾಲ್ನಡಿಗೆಯಲ್ಲಿ ಹೊರಟರು. ನೂರೈವತ್ತಕ್ಕೂ ಅಧಿಕ ಕಾರ್ಯಕರ್ತರು ಈ ಕಾಲ್ನಡಿಗೆಯಲ್ಲಿ ಜೊತೆಯಲ್ಲಿ ಸಾಗಿದರು.
