Connect with us

    LATEST NEWS

    ನಾಳೆ ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

    ನಾಳೆ ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

    ನವದೆಹಲಿ ಎಪ್ರಿಲ್ 13: ಕಳೆದ ಮೂರು ನಾಲ್ಕು ದಿನಗಳಿಂದ ಮೋದಿ ಭಾಷಣಕ್ಕಾಗಿ ಕಾಯುತ್ತಿದ್ದ ಜನರಿಗೆ ಈಗ ಖುಷಿ ಸುದ್ದಿ ಸಿಕ್ಕಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಬರೆಯಲಾಗಿದೆ.

    ಒಟ್ಟಿನಲ್ಲಿ ಕೊರೊನಾ ವೈರಸ್ ಭೀತಿ ಬಳಿಕ ನಾಳೆಯ ಭಾಷಣ ಸೇರಿ ಮೂರನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ನಾಳೆಯೇ ಮತ್ತೊಮ್ಮೆ ದೇಶವ್ಯಾಪಿ ಲಾಕ್ ಡೌನ್ ಬಗ್ಗೆ ಘೋಷಣೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

    ಈ ಹಿಂದೆ ಮಾರ್ಚ್ 19 ರಂದು ದೇಶವನ್ನು ಉದ್ದೇಶಿಸಿ ಮಾ.21 ರಂದು ಜನತಾ ಕಫ್ರ್ಯೂ ಮಾಡಬೇಕೆಂದು ಕೇಳಿಕೊಂಡಿದ್ದರು. ಇದಾದ ಬಳಿಕ ಮಾ.24 ರಂದು 21 ದಿನಗಳ ಲಾಕ್‍ಡೌನ್ ಘೋಷಣೆ ಮಾಡಿದ್ದರು.

    ಇದಾದ ಬಳಿಕ ಎಪ್ರಿಲ್ 5 ರಂದು ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ರಾತ್ರಿ 9 ಗಂಟೆಗೆ ವಿದ್ಯುತ್ ದೀಪ ಆಫ್ ಮಾಡಿ ದೀಪ/ ಕ್ಯಾಂಡಲ್ ಲೈಟ್/ ಮೊಬೈಲ್ ಟಾರ್ಚ್ ಬೆಳಗಿ ಎಂದು ಮನವಿ ಮಾಡಿದ್ದರು. ಇದಕ್ಕೂ ದೇಶದಲ್ಲಿ ಭಾರೀ ಬೆಂಬಲ ಸಿಕ್ಕಿತ್ತು.

    Share Information
    Advertisement
    Click to comment

    Leave a Reply

    Your email address will not be published. Required fields are marked *