LATEST NEWS
ಮೋದಿ ಅಲೆ ಹೆಚ್ಚಾಗಿರುವುದಕ್ಕೆ ಮಹಾರಾಷ್ಟ್ರ ಹರಿಯಾಣ ಫಲಿತಾಂಶವೇ ಸಾಕ್ಷಿ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಮೋದಿ ಅಲೆ ಹೆಚ್ಚಾಗಿರುವುದಕ್ಕೆ ಮಹಾರಾಷ್ಟ್ರ ಹರಿಯಾಣ ಫಲಿತಾಂಶವೇ ಸಾಕ್ಷಿ – ಗೃಹ ಸಚಿವ ಬಸವರಾಜ ಬೊಮ್ಮಾಯಿ
ಮಂಗಳೂರು ಅಕ್ಟೋಬರ್ 24: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಗಟ್ಟಿಯಾಗಿದ್ದು, 2019ರಿಂದ ಮೋದಿ ಅಲೆ ದೇಶದಲ್ಲಿ ಭಾರಿ ಹೆಚ್ಚಾಗಿದೆ. ಅದಕ್ಕೆ ಹರಿಯಾಣ, ಮಹಾರಾಷ್ಟ್ರ ಚುನಾವಣೆಯ ಫಲಿತಾಂಶವೇ ಸಾಕ್ಷಿಯಾಗಿ ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹುಬ್ಬಳ್ಳಿ ರೈಲು ನಿಲ್ದಾಣ ದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಾವತಿ ಎಕ್ಸ್ ಪ್ರೆಸ್ ನಲ್ಲಿ ನಿಂಬೆ ಹಣ್ಣಿನ ಮಾದರಿಯಲ್ಲಿ ಸ್ಪೋಟಕ ಇತ್ತು, ಈ ಕುರಿತಂತೆ ಅಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸ್ ಸಂಪರ್ಕ ಹೊಂದಿದ್ದೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಉಗ್ರ ಸಂಘಟನೆಗಳ ಕೈವಾಡ ಬಗ್ಗೆ ತನಿಖೆ ನಂತರ ಗೊತ್ತಾಗಲಿದೆ ಎಂದರು.
