Connect with us

LATEST NEWS

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಮಲೆಯಾಳಂ ನಟ ಮೋಹನ್ ಲಾಲ್

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಮಲೆಯಾಳಂ ನಟ ಮೋಹನ್ ಲಾಲ್

ಮಂಗಳೂರು ಫೆಬ್ರವರಿ 27: ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್ ಉಡುಪಿ ಜಿಲ್ಲೆಯ ಪ್ರಸಿದ್ಧ ದೇವಾಲಯ ಕೊಲ್ಲರೂ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಮಲೆಯಾಳಂ ನಟ ಮೋಹನ್ ಲಾಲ್ ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ನಂತರ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮೋಹನ್ ಲಾಲ್ ನಟನೆಯ ಮಲಯಾಳಂ ಚಲನಚಿತ್ರ ಕಾಯಂಕುಳಂ ಕೊಚ್ಚುನ್ನಿ ಚಿತ್ರದ ಚಿತ್ರೀಕರಣ ದಕ್ಷಿಣಕನ್ನಡ ಜಿಲ್ಲೆಯ ಸುತ್ತಮುತ್ತ ನಡೆಯುತ್ತಿರುವ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಮುಖ ದೇವಸ್ಥಾನಗಳಿಗೆ ಮೋಹನ್ ಲಾಲ್ ಭೇಟಿ ನೀಡುತ್ತಿದ್ದಾರೆ, ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದರು.

VIDEO