Connect with us

LATEST NEWS

ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ

ಮಂಗಳೂರು ಜನವರಿ 21: ಮಂಗಳೂರಿನ ಖಾಸಗಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಕಾಸರಗೋಡು ನಿವಾಸಿ ಹುಸೇನ್ (41) ಎಂದು ಗುರುತಿಸಲಾಗಿದ್ದು, ಈತ ಜನವರಿ 14 ರಂದು ದೇರಳಕಟ್ಟೆ-ಮಂಗಳೂರು ಮಾರ್ಗದ ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತಂತೆ ಈ ಘಟನೆ ಯುವತಿ ಸಾಮಾಜಿಕ ಜಾಲತಾಣದಲ್ಲಿ ತನಗಾದ ಕಿರುಕುಳದ ಬಗ್ಗೆ ಪೋಸ್ಟ್ ಮಾಡಿದ್ದಳು. ಅಲ್ಲದೆ ಆರೋಪಿ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಳು.


ಜನವರಿ 14 ರಂದು ಮಂಗಳೂರಿನ ದೇರಳಕಟ್ಟೆ – ಮಂಗಳೂರು ಮಾರ್ಗದ ಖಾಸಗಿ ಬಸ್ ಒಂದರಲ್ಲಿ ಯುವತಿ ಆಕೆಯ ಪಕ್ಕದಲ್ಲೇ ಕುಳಿತುಕೊಂಡ ಕಾಮುಕ, ಯುವತಿಗೆ ದೈಹಿಕ ಕಿರುಕುಳ ನೀಡಿದ್ದಾನೆ. ಯುವತಿ ವಿರೋಧ ವ್ಯಕ್ತಪಡಿಸಿದ ಮೇಲೆ ಬಸ್​ನಿಂದ ಕೆಳಗಿಳಿದ ಆರೋಪಿ, ಮತ್ತೊಂದು ಬಸ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಮತ್ತೆ ಕಿರುಕುಳ ಮತ್ತೆ ಯುವತಿ ಪಕ್ಕದಲ್ಲೇ ಕೂತು ಅಸಭ್ಯವಾಗಿ ವರ್ತಿಸಿದ್ದಾನೆ.

ಬಸ್​ನಲ್ಲಿ ಕಾಮುಕನೊಬ್ಬ ಹಾಡಹಗಲೇ ಯುವತಿಗೆ ಕಿರುಕುಳ ನೀಡಿದ್ದು, ರಕ್ಷಣೆಗಾಗಿ ಯುವತಿ ಚೀರಾಡಿದರೂ ಯಾರೊಬ್ಬರೂ ಸಹಾಯಕ್ಕೆ ಬಂದಿಲ್ಲ! ಕೂಡಲೇ ಆ ಬಸ್​ನಿಂದ ಇಳಿದು ಮತ್ತೊಂದು ಬಸ್​ನಲ್ಲಿ ಹಿಂಬಾಲಿಸಿಕೊಂಡು ಬಂದವ ಮತ್ತೆ ಆಕೆಯೊದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಆ ವೇಳೆ ಆತನ ಫೊಟೋಗಳನ್ನು ತೆಗೆದ ಸಂತ್ರಸ್ತ ಯುವತಿ, ಇನ್​ಸ್ಟಾಗ್ರಾಂನಲ್ಲಿ ಹಾಕಿ ಆ ಘಟನೆ ಬಗ್ಗೆ ವಿವರಿಸಿದ್ದಾರೆ.

ಯುವತಿಯ ಪೋಸ್ಟ್ ಆಧಾರದ ಮೇರೆಗೆ ಕಾಸರಗೋಡು ನಿವಾಸಿ ಹುಸೇನ್ (41) ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ಪೊಲೀಸ್  ಕಮೀಷನರ್ ಎದುರೇ ಯುವತಿ ಕಪಾಳಕ್ಕೆ ಬಾರಿಸಿದ್ದಾಳೆ. ಯುವತಿಯ ದಿಟ್ಟ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್​ ಕಮಿಷನರ್ ಎನ್. ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *