LATEST NEWS
ಎಸ್ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಇಡಿ ವಶಕ್ಕೆ

ನವದೆಹಲಿ ಮಾರ್ಚ್ 04: ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.
ಸೋಮವಾರ ರಾತ್ರಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರನ್ನು ವಶಕ್ಕೆ ಪಡೆಯಲಾಯಿತು. 2009 ರಲ್ಲಿ ಸ್ಥಾಪನೆಯಾದ ಎಸ್‌ಡಿಪಿಐ, ಈ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿತ್ತು, ಇದನ್ನು ಕೇಂದ್ರ ಸರ್ಕಾರವು ಕೆಲವು ವರ್ಷಗಳ ಹಿಂದೆ ನಿಷೇಧಿಸಿತ್ತು. ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದೆ ಎಂಬ ಆರೋಪವು ಈ ಸಂಘಟನೆ ಮೇಲಿದೆ. ಆದರೆ, ಈ ಆರೋಪವನ್ನು ಎಸ್‌ಡಿಪಿಐ ನಿರಾಕರಿಸಿದೆ.

1 Comment