Connect with us

    LATEST NEWS

    ಮುಂಗಾರು ಮಳೆ ಎಂಟ್ರಿ – ಕರಾವಳಿಯ ಭಾರೀ ಮಳೆ

    ಬೆಂಗಳೂರು ಜೂನ್ 03: ಕರಾವಳಿ ಕರ್ನಾಟಕಕ್ಕೆ ನಿನ್ನೆ ಮುಂಗಾರು ಮಳೆ ಎಂಟ್ರಿಕೊಟ್ಟಿದ್ದು, ನಿನ್ನೆ ರಾತ್ರಿಯಿಂದಲೇ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ತಂದಿದ್ದ ಮುಂಗಾರು, ಕರ್ನಾಟಕದ ಬೆಂಗಳೂರಿನಲ್ಲೂ ಅದೇ ಪರಿಸ್ಥಿತಿ ತಂದಿದೆ. ಮುಂದಿನ 2 – 3 ದಿನಗಳಲ್ಲಿ ರಾಜ್ಯದ ಉಳಿದ ಭಾಗಗಳಿಗೂ ಮುಂಗಾರು ವ್ಯಾಪಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

    ಬೆಂಗಳೂರು ನಗರ ಸಹಿತ ದಕ್ಷಿಣ ಕರ್ನಾಟಕದ ಬಹುತೇಕ ಭಾಗಕ್ಕೆ ಮುಂಗಾರು ಪ್ರವೇಶಿಸಿದೆ. ಕರ್ನಾಟಕದ ಉಳಿದ ಭಾಗದಲ್ಲಿ ಮುಂಗಾರು ಮಳೆಯು 2-3 ದಿನಗಳಲ್ಲಿ ಪ್ರವೇಶವಾಗುವ ಅನುಕೂಲಕರ ಪರಿಸ್ಥಿತಿಗಳು ನಿರ್ಮಾಣಗೊಂಡಿವೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಜೂ. 6ರ ವರೆಗೆ ಹಗುರದಿಂದ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿಯೂ ಬೀಸಲಿದೆ.

    ಈ ನಡುವೆ ಮಂಗಳೂರಿನಲ್ಲಿ ನಿನ್ನೆ ರಾತ್ರಿ ಉತ್ತಮ ಮಳೆಯಾಗಿದೆ. ನಿನೆ ಹಗಲು ಸಂಪೂರ್ಣ ಬಿಸಿಲಿನಿಂದ ಕೂಡಿತ್ತು, ಆದರೆ ರಾತ್ರಿ ವೇಳೆ ಉತ್ತಮ ಮಳೆಯಾಗಿದೆ. ಇಂದು ಬೆಳಿಗ್ಗೆಯಿಂದರೇ ಮೊಡಕವಿದ ವಾತಾವರಣ ಇದ್ದು. ನಂತರ ಉತ್ತಮ ಮಳೆಯಾಗುತ್ತಿದೆ.

    ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ
    ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಆದ್ದರಿಂದ ಜಿಲ್ಲೆಯಲ್ಲಿ ಜೂನ್ 3 ರಿಂದ ಜೂನ್ 8 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಹಾಗೂ ಸಿಡಿಲಿನ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿರಬೇಕು.
    ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

    ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ : 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *