Connect with us

KARNATAKA

ಜೂನ್ 7 ಅಥವಾ 8ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ – ಹವಾಮಾನ ಇಲಾಖೆ

ಬೆಂಗಳೂರು ಮೇ 17: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ, ಇದೀಗ ಜೂನ್ 7 ಅಥವಾ 8 ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಇದೇ ಮೇ 19ರಂದು ನೈಋತ್ಯ ಮುಂಗಾರು ಮಾರುತಗಳು ಅಂಡಮಾನ್ ನಿಕೋಬಾರ್ ಮೂಲಕ ಭಾರತವನ್ನು ಪ್ರವೇಶ ಮಾಡಲಿವೆ. ಮೇ 31 ರಂದು ಕೇರಳಕ್ಕೆ ಮಾರುತಗಳು ಪ್ರವೇಶಿಸಲಿದ್ದು, . ಜೂನ್ ಮೊದಲ ವಾರದಲ್ಲಿ ಈ ಮಾರುತಗಳು ಕರ್ನಾಟಕವನ್ನು ಪ್ರವೇಶ ಮಾಡಲಿವೆ. ಆದ್ದರಿಂದ ಜೂನ್ 7 ಅಥವಾ 8 ರಂದು ಮುಂಗಾರು ಮಳೆ ಶುರುವಾಗಲಿದೆ. ಈ ಬಾರಿ ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *