LATEST NEWS
ಮೊಂಟೆಪದವು ದುರಂತದಲ್ಲಿ ಮಡಿದ ಅಜ್ಜಿ ಮೊಮ್ಮಕ್ಕಳ ಅಂತ್ಯಸಂಸ್ಕಾರ – ಶೋಕ ಸಾಗರದಲ್ಲಿ ಮುಳುಗಿದ ಗ್ರಾಮ

ಮಂಗಳೂರು ಮೇ 31: ಭಾರೀ ಮಳೆಯಿಂದಾಗಿ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಅಜ್ಜಿ, ಮೊಮ್ಮಕ್ಕಳ ಅಂತ್ಯ ಸಂಸ್ಕಾರ ಶನಿವಾರ ನಡೆಯಿತು.
ಮೃತರಾದ ಅಜ್ಜಿ ಮತ್ತು ಮೊಮ್ಮಕ್ಕಳ ಅತ್ಯಕ್ರಿಯೆ ಕುಸಿದು ಬಿದ್ದ ಮನೆಯ ಪಕ್ಕದಲ್ಲೇ ನೆರವೇರಿತು. ಸೀತಾರಾಮ್ ಪೂಜಾರಿ ಮತ್ತು ಅಶ್ವಿನಿ ಪೂಜಾರಿ ದಂಪತಿಯ ಇಬ್ಬರು ಮಕ್ಕಳು ಆರ್ಯನ್ ಮತ್ತು ಆರುಷ್ ಮಣ್ಣಲ್ಲಿ ಮಣ್ಣಾಗಿದ್ದಾರೆ. ಮೊಮ್ಮಕಳ ಸಮಾಧಿ ಪಕ್ಕದಲ್ಲೇ ಅಜ್ಜಿ ಪ್ರೇಮಾ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೂವರ ಸಾವಿನಿಂದ ಇಡೀ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಅಂತ್ಯಕ್ರಿಯೆ ವೇಳೆ ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
