ಕಿನ್ನಿಗೋಳಿ ಮೇ 07: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಐಕಳ ಬಳಿ ಗುರುವಾರ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

KA-20 ನೋಂದಣಿ ಸಂಖ್ಯೆಯ ಕಾರು ಪಕ್ಷಿಕೆರೆಯಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿ ಚಾಲಕ ಮಾತ್ರ ಇದ್ದನೆಂದು ತಿಳಿದುಬಂದಿದೆ. ಚಾಲಕ ಐಕಳ ಸಮೀಪ ತಿರುವು ತೆಗೆದುಕೊಳ್ಳುತ್ತಿದ್ದಾಗ ವಾಹನವು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾನೆ.