LATEST NEWS
ಮೂಡಬಿದ್ರೆ – ಕಬ್ಬಿಣದ ಸೆಂಟ್ರಿಂಗ್ ಶೀಟ್ ಕದ್ದಿದ್ದ ಆರೋಪಿ ಅರೆಸ್ಟ್…!!

ಮೂಡಬಿದ್ರೆ ಸೆಪ್ಟೆಂಬರ್ 14: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಪೈಪ್ ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಮೂಡಬಿದಿರೆ ನಿವಾಸಿ ಮಹಮ್ಮದ್ ಸಾಯಿಲ್ ( 21) ಎಂದು ಗುರುತಿಸಲಾಗಿದೆ. ಆರೋಪಿ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್‌ಗಳನ್ನು ಕಳವು ಮಾಡಿದ್ದ.

ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ ಜಿ ರವರು ಮೇಲಿನ ಪ್ರಕರಣದಲ್ಲಿ ಕಳ್ಳತನ ಮಾಡಿದ ಒಂದನೇ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 2,50,000 ರೂ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಕಬ್ಬಿಣದ ಪೈಪನ್ನು ಸ್ವಾಧೀನ ಪಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ.