Connect with us

    LATEST NEWS

    ಮೂಡಬಿದಿರೆ ಖಾಸಗಿ ಕಾಲೇಜಿನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

    ಮೂಡಬಿದಿರೆ ಅಕ್ಟೋಬರ್ 09: ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


    ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply