LATEST NEWS
ಮೂಡುಬಿದಿರೆ ಮದುವೆಗೆ ಆಗಮಿಸಿದವರು ಮಸಣ ಸೇರಿದರು – ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರ ಸಾವು

ಮಂಗಳೂರು ನವೆಂಬರ್ 24: ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ನಾಲ್ವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ನಡೆದಿದೆ.
ಮೃತಪಟ್ಟವರನ್ನು ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಅರ್ಶಿತಾ (20), ವೇಣೂರಿನ ಸುಬಾಸ್ (19) ಹಾಗೂ ಬಜ್ಪೆ ಪೆರಾರದ ರವಿ (30) ಎಂದು ಗುರುತಿಸಲಾಗಿದೆ.
ಇವರು ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದರು. ಮದುವೆಗೆ ಬಂದಿದ್ದ ಇವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ.ಈ ಸಂಬಂಧ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
