DAKSHINA KANNADA
ಮೂಡಬಿದಿರೆ – ಯುವಕನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮಂಗಳೂರು : ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಕೊಲೆಗೈದಿರುವ ಘಟನೆ ಮೂಡಬಿದಿರೆಯ ಬಡಗ ಮಿಜಾರು ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡ ಎಂಬುವರ ಪುತ್ರ ಉಮೇಶ್ ಗೌಡ (35) ಎಂದು ಗುರುತಿಸಲಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಮಧ್ಯಾಹ್ನದ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕೊಲೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ,
