Connect with us

    LATEST NEWS

    ಮೂಡಬಿದಿರೆ: ತಲೆಗೆ ಹೊಡೆದು ಪತ್ನಿ ಕೊಲೆ – ಆರೋಪಿ ಪತಿಯ ಬಂಧನ

    ಮೂಡುಬಿದಿರೆ ಅಗಸ್ಟ್ 18: ಪತಿಯಿಂದ ಹಲ್ಲೆಗೊಳಗಾದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಮೂಡಬಿದಿರೆ ತಾಲೂಕಿನ ಧರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸುನೀತಾ (30) ಎಂದು ಗುರುತಿಸಲಾಗಿದೆ.


    ಒಂದೂವರೆ ವರ್ಷದ ಹಿಂದೆ ಇವರು ದಿನ್ ರಾಜ್ ನನ್ನು ಮದುವೆಯಾಗಿದ್ದರು. ನಿನ್ನೆ ಸಂಜೆ ಗಂಡ- ಹೆಂಡತಿಯ ಮಧ್ಯೆ ಜಗಳ ನಡೆದಿದ್ದು, ಈ ಸಂದರ್ಭ ಜಗಳ ತಾರಕಕ್ಕೇರಿದಾಗ ಗಂಡ ದಿನ್ ರಾಜ್ ಹೆಂಡತಿಯ ತಲೆಗೆ ಹೊಡೆದಿದ್ದಾರೆ.

    ಆಗ ರಕ್ತ ಸೋರುತ್ತಿರುವುದನ್ನು ಕಂಡ ದಿನ್ ರಾಜ್ ಸುನೀತಾ ಅವರ ಸಹೋದರ ಸಂಬಂಧಿಗೆ ಕರೆ ಮಾಡಿದ್ದಾನೆ. ಆಗ ಅವರು ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದಾರೆ. ಮೊದಲಿಗೆ ಬೆಳುವಾಯಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ದಾಖಲಿಸಲು ನಿರಾಕರಿಸಿದ್ದಾಗ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅಧಿಕ ರಕ್ತಸ್ರಾವ ಆಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದ ಸುನೀತಾ ಮೃತಪಟ್ಟಿದ್ದಾರೆ.

    ಸುನಿತಾ ಮನೆಯವರು ಆಕೆಯ ಸಾವಿನ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪತಿ ದಿನರಾಜ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹಾರೆಯಿಂದ ಆಕೆಗೆ ಹೊಡೆದು, ಬಳಿಕ ಸುಳ್ಳು ಹೇಳಿ ಆಸ್ಪತ್ರೆಗೆ ಕರೆದುಕೊಂಡು ಬಂದಿರುವುದು ತಿಳಿದುಬಂದಿದೆ. ಆತನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply