ಬೆಳ್ತಂಗಡಿ ಮಾರ್ಚ್ 22: ಮಹಿಳೆಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಅಮಾನಾತಾಗಿರುವ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ವಿರುದ್ದ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ಮೇಲೆ 2018 ರಿಂದ 2023 ರ ನಡುವೆ ಮನೆಗೆ ಬಂದು ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಮಾ.21 ರಂದು ಸಂಜೆ ವೇಣೂರು ಪೊಲೀಸ್ ಠಾಣೆಯಲ್ಲಿ ನೊಂದ ಮಹಿಳೆ ದೂರು ನೀಡಿದ್ದಾರೆ.
2020ರಲ್ಲಿ ಸಂದೇಶ್ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದರು. ಹೀಗಾಗಿ ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ.