LATEST NEWS
ಕದ್ರಿ ಪಾರ್ಕ್ ಗೆ ಬಂದಿದ್ದ ಅನ್ಯಕೋಮಿನ ಜೋಡಿ ಮೇಲೆ ಹಲ್ಲೆ – ನಾಲ್ವರು ಅರೆಸ್ಟ್

ಮಂಗಳೂರು ಫೆಬ್ರವರಿ 10: ಕದ್ರಿ ಪಾರ್ಕ್ ಗೆ ಬಂದಿದ್ದ ಅನ್ಯಕೋಮಿನ ಜೋಡಿ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಸಂಘಟನೆಯ ನಾಲ್ವರು ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ ಧೀರಜ್, ಬಂಟ್ವಾಳದ ಅಭಿಜಿತ್ ಬಂಧಿತ ಆರೋಪಿಗಳು.
ಅವರು ಹಿಂದೂ ಸಂಘಟನೆಯ ಕಾರ್ಯಕರ್ತರು ಎಂದು ಹೇಳಲಾಗಿದೆ. ಆರೋಪಿಗಳು ಬುಧವಾರ ಉತ್ತರ ಕರ್ನಾಟಕ ಮೂಲದ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಅನ್ಯ ಸಮುದಾಯದ ಯುವಕ ಯುವತಿ ನಗರದ ಕದ್ರಿ ಪಾರ್ಕ್ ಗೆ ಆಗಮಿಸಿತ್ತು ಎಂದು ವರದಿಯಾಗಿದೆ. ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿ ಕದ್ರಿ ಪಾರ್ಕ್ ಗೆ ಬಂದಿದ್ದು, ಇದನ್ನು ಪ್ರಶ್ನಿಸಿ ಸಂಘಟನೆ ಹಲ್ಲೆ ನಡೆದಿದೆ.