DAKSHINA KANNADA
ಭಜರಂಗದಳದ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ: ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆಗೆ ಯತ್ನ
ಮಂಗಳೂರು, ಡಿಸೆಂಬರ್ 11: ಮಂಗಳೂರಿನಲ್ಲಿ ಮತ್ತೆ ಭಜರಂಗದಳದ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಈ ಘಟನೆ ನಡೆದಿದ್ದು, ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರು ಸುತ್ತಾಡುತ್ತಿದ್ದರು, ಈ ವೇಳೆ ಕೊಟ್ಟಾರ ಬಳಿ ತಡೆದ ಭಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ಭಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಜೋಡಿಗಳು ಹೊಟೇಲ್ ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದಾರೆ. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ, ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You must be logged in to post a comment Login