LATEST NEWS
ಕುಂದಾಪುರದಲ್ಲಿ ನೈತಿಕ ಪೊಲೀಸ್ ಗಿರಿ
ಉಡುಪಿ ಸೆಪ್ಟೆಂಬರ್ 13: ಕುಂದಾಪುರದಿಂದ ಉಡುಪಿಯತ್ತ ಸಾಗುತ್ತಿದ್ದ ಮೂವರು ಯುವತಿಯರು ಹಾಗೂ ಇಬ್ಬರು ಯುವಕರಿದ್ದ ಕಾರನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿ ಪೊಲೀಸರಿಗೊಪ್ಪಿಸಿದ ಘಟನೆ ಕೋಟೇಶ್ವರದಲ್ಲಿ ಸೋಮವಾರ ಸಂಜೆ ನಡೆದಿದೆ.
ಉಡುಪಿಯ ಕಾಲೇಜೊಂದರ ವಿಧ್ಯಾರ್ಥಿಗಳಾದ ಈ ಯುವಕ ಯುವತಿಯರು ಕುಂದಾಪುರದ ಮರವಂತೆ ಯಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಈ ವಿಧ್ಯಾರ್ಥಿಗಳನ್ನು ಗಮನಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರನ್ನು ಹಿಂಬಾಲಿಸಿ ಕೋಟೇಶ್ವರ ದಲ್ಲಿ ಅವರನ್ನು ಅಡ್ಡಗಟ್ಟಿ ನಂತರ ಕುಂದಾಪುರ ಪೊಲೀಸರಿಗೆ ಈ ವಿಧ್ಯಾರ್ಥಿಗಳನ್ನು ಒಪ್ಪಿಸಿದ್ದಾರೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆ ಎದುರು ನೂರಾರು ಜನರು ಜಮಾಯಿಸಿದ್ದರು. ಈ ಹಿನ್ನಲೆ ಪೊಲೀಸ್ ಠಾಣೆಯಲ್ಲಿ ಎದುರು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜನರು ಪೊಲೀಸ್ ಠಾಣೆಯಲ್ಲಿ ಎದುರು ಜಮಾವಣೆಗೊಳ್ಳುತ್ತಿದ್ದಂತೆ ಗರಂ ಆದ ಪೊಲೀಸರು ಸಂಘಟನೆಯ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪೊಲೀಸರು ಮತ್ತು ಸಂಘಟನೆಯ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
You must be logged in to post a comment Login