LATEST NEWS
ಮಂಗಳೂರಿನಲ್ಲಿ ಮೆಡಿಕಲ್ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ
ಮಂಗಳೂರು ಸೆಪ್ಟೆಂಬರ್ 28: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ನೈತಿಕ ಪೊಲೀಸ್ ಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ.
ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಅನ್ಯಕೋಮಿನ ಯುವಕ-ಯುವತಿಯರಿದ್ದ ಬೊಲೇರೋ ಜೀಪನ್ನು ಅ ತಡೆದು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲು ಯುವಕರ ಗುಂಪು ಮುಂದಾದಾಗ ಮಾಹಿತಿ ಪಡೆದ ಪೊಲೀಸ್ ಇನ್ಸ್ಪೆಕ್ಟರ್ ಶರೀಫ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಭಾಯಿಸಿ ವಿದ್ಯಾರ್ಥಿಗಳನ್ನು ವಾಹನ ಸಮೇತ ಠಾಣೆಗೆ ಕರೆ ತಂದಿದ್ದಾರೆ.
ವಾಹನದಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಕೆಲವು ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎನ್ನಲಾದ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿ ಹರಿದಾಡುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ವೀಡಿಯೊದಲ್ಲಿ, ಗುಂಪೊಂದು ಕಾರನ್ನು ಕೂತಿರುವ ತಂಡಕ್ಕೆ ಕೆಲವರನ್ನು ಅಶ್ಲೀಲ ಪದಗಳಿಂದ ನಿಂದಿಸುತ್ತಿರುವುದು ಗೋಚರಿಸುತ್ತದೆ.
ದೇರಳಕಟ್ಟೆಯ ಕಾಲೇಜಿನ ವಿದ್ಯಾರ್ಥಿನಿಯರು ಬೇರೆ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳೊಂದಿಗೆ ಸಂಚರಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.