LATEST NEWS
ಮಂಗಳೂರು ಮುಂದುವರೆದ ನೈತಿಕ ಪೊಲೀಸ್ ಗಿರಿ – ಇಬ್ಬರ ಬಂಧನ

ಮಂಗಳೂರು ಅಕ್ಟೋೂಬರ್ 07: ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಲೇ ಇದ್ದು, ಮತ್ತೆ ಸೈಂಟ್ ಆಗ್ನೆಸ್ ಕಾಲೇಜು ಬಳಿ ತಿರುಗಾಡುತ್ತಿದ್ದ ಯುವ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದು, ನೈತಿಕ ಪೊಲೀಸ್ಗಿರಿ ನಡೆಸಿದ್ದಾರೆ ಎಂಬ ದೂರಿನ ಮೇರೆಗೆ ಇಬ್ಬರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಯುವ ಜೋಡಿಗಳಿಬ್ಬರು ಸೈಂಟ್ ಆಗ್ನೆಸ್ ಕಾಲೇಜು ಬಳಿ ಇದ್ದ ಸಂದರ್ಭದಲ್ಲಿ ಇವರಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಯುವ ಜೋಡಿಯನ್ನು ಬಜರಂಗದಳ ಕಾರ್ಯಕರ್ತರು ಕದ್ರಿ ಪೊಲೀಸರ ವಶಕ್ಕೆ ನೀಡಿದ್ದರು.ಈ ಸಂದರ್ಭದಲ್ಲಿ ಯುವ ಜೋಡಿಯು ತಮ್ಮ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
