Connect with us

LATEST NEWS

ಮಂಗಳೂರು – ಬೀಚ್ ಗೆ ಹೊಗಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ

ಮಂಗಳೂರು ಜುಲೈ 22: ಪಣಂಬೂರು ಬೀಚ್ ಗೆ ತೆರಳಿದ್ದ ಕಾಲೇಜಿನ ವಿಧ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್‍ಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳ ತಂಡ ಬೈಕ್‍ನಲ್ಲಿ ವಿದ್ಯಾರ್ಥಿಗಳನ್ನು ಹಿಂಬಾಲಿಸಿತ್ತು. ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.

ಬೀಚ್‍ಗೆ 4 ಜನ ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *