Connect with us

    LATEST NEWS

    ಮಂಗಳೂರಿನಲ್ಲಿ ಮುಂದುವರೆದ ನೈತಿಕ ಪೊಲೀಸ್ ಗಿರಿ…ಬಸ್ ತಡೆದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಮಂಗಳೂರು ಎಪ್ರಿಲ್ 2: ಮಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು, ನಿನ್ನೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದ ಘಟನೆ  ನಗರದ ಪಂಪ್ ವೆಲ್ ಬಳಿ  ಸಂಭವಿಸಿದೆ.


    ಹಲ್ಲೆಗೊಳಗಾದ ಯುವಕನನ್ನು ಬೈಕಂಪಾಡಿ -ಜೋಕಟ್ಟೆ ಪರಿಸರ ನಿವಾಸಿ ಅಸ್ವಿದ್ ಅನ್ವರ್ ಮುಹಮ್ಮದ್ (24) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಯುವಕ ಪ್ರಯಾಣಿಸುತ್ತಿದ್ದ ಇತನ ಜೊತೆ ಅನ್ಯಕೋಮಿನ ಯುವತಿಯೊಬ್ಬಳು ಇದ್ದರು ಎಂಬ ಕಾರಣಕ್ಕೆ  ರಾತ್ರಿ ಸುಮಾರು 9:30ಕ್ಕೆ ಬಸ್ಸನ್ನು ತಡೆದು ನಿಲ್ಲಿಸಿದ‌ ನಾಲ್ಕೈದು ಮಂದಿಯ ತಂಡ ಯುವಕನನ್ನು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

    ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಯುವಕನ ಜೊತೆ ಯುವತಿಯೊಬ್ಬಳಿದ್ದು, ಆಕೆಯನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನೈತಿಕತೆಯ ಹೆಸರಿನಲ್ಲಿ ದುಷ್ಕರ್ಮಿಗಳು ಕಾನೂನು ಕೈಗೆತ್ತಿಕೊಂಡ ಆರೋಪ ಕೇಳಿ ಬಂದಿದೆ.ಒಂದು ವಾರದಲ್ಲಿ ಜಿಲ್ಲೆಯ‌ ಸುರತ್ಕಲ್, ಬೆಳ್ತಂಗಡಿ, ಪಂಪ್‌ವೆಲ್ ಬಳಿ ಇಂತಹ ಘಟನೆಗಳು ನಡೆಯುತ್ತಿದೆ ಪ್ರಸ್ತುತ ಜೊತೆಗಿದ್ದ ಯುವತಿಯನ್ನು ಮನೆಗೆ ಕಳುಹಿಸಲಾಗಿದೆ. ಹಲ್ಲೆಗೆ ಸಂಬಂಧಿಸಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಡಿಸಿಪಿ ಮತ್ತು ಎಸಿಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್‍ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply